ಪರಮಪೂಜ್ಯ ಶ್ರೀ ಶ್ರೀ ಶ್ರೀವಾಲ್ಮೀಕಿ ಪ್ರಸನ್ನಾನಂದ ಶ್ರೀಗಳು ಮತ್ತು ಸಮುದಾಯದ ಮುಖಂಡರು ಇಂದು ಬೆಂಗಳೂರಿನಲ್ಲಿ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರನ್ನು ಭೇಟಿಯಾದರು

ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಿಸುವ ಸಂಬಂಧ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವನ್ನು ರಚಿಸಿದ್ದು ಈಗಿರುವ 3% ಮೀಸಲಾತಿಯನ್ನು 7.5% ಹೆಚ್ಚಿಸಲು ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿದ್ದು, ಫೆಬ್ರವರಿ 9ರಂದು ನಡೆದ ವಾಲ್ಮೀಕಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಮೀಸಲಾತಿ ಹೆಚ್ಚಿಸಲು ಭರವಸೆ ಕೊಟ್ಟ ಹಿನ್ನೆಲೆಯಲ್ಲಿ ಜಾತ್ರೆ ಮುಗಿದ ಮರುದಿನವೇ ಪರಮಪೂಜ್ಯ ಶ್ರೀ ಶ್ರೀ ಶ್ರೀವಾಲ್ಮೀಕಿ ಪ್ರಸನ್ನಾನಂದ ಶ್ರೀಗಳು ಮತ್ತು ಸಮುದಾಯದ ಮುಖಂಡರು ಇಂದು ಬೆಂಗಳೂರಿನಲ್ಲಿ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರನ್ನು ಭೇಟಿ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ಬೇಕಾದ ಮಾಹಿತಿಗಳನ್ನು ನೀಡಿ ಸರಕಾರಕ್ಕೆ ಕೂಡಲೇ ವರದಿ ಸಲ್ಲಿಸುವಂತೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು. ಮನವಿಗೆ ಸ್ಪಂದಿಸಿದ ಆಯೋಗದ ಅಧ್ಯಕ್ಷರು ಶೀಘ್ರದಲ್ಲೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂಬ ಭರವಸೆಯನ್ನು ನೀಡಿದರು
© 2020, Shri Maharushi Valmiki Gurupeeta | All Rights Resever